ವಿಷಯಕ್ಕೆ ಹೋಗಿ

ಇಸ್ಕಾನ್ ಎಂಬ ಶಾಪಿಂಗ್ ಮಾಲ್

ಮೊನ್ನೆ ಇಸ್ಕಾನ್ ದೇವಸ್ಥಾನಕ್ಕೆ ಗೆಳೆಯರೊಂದಿಗೆ ಅನಿವಾರ್ಯವಾಗಿ ಹೋಗಬೇಕಾಗಿ ಬಂತು. ದ್ವಾರದಲ್ಲೇ ಮೆಟೆಲ್ ಡಿಟೆಕ್ಟರ್‌ನಿಂದ ಪರಿಶೀಲನೆ ನಂತರ ಒಳ ಪ್ರವೇಶಿಸಿ, ಮುಂದೆ ನಡೆದಾಗ ಒಬ್ಬರು ಕರೆದು ನಾಲ್ಕೈದು ಜನರಿಗಾಗಿ ಇರುವ ಟಿಕೇಟೊಂದರ "ಆಫರ‍್" ಬಗ್ಗೆ ಹೇಳಿದರು.

ನಂತರ ಒಳಗೆ ಹೋದಾಗ ಅಲ್ಲಲ್ಲಿ "ಜೇಬುಗಳ್ಳರಿದ್ದಾರೆ ಎಚ್ಚರಿಕೆ" ಎಂಬ ಫಲಕ ಕಾಣಿಸಿತು. ದೇವರ ದಶ್ನ ಮುಗಿಸಿ ಹೊರ ಬರುತ್ತಿರುವಾಗ ಎದುರಾಯ್ತು, ಜನ ಜಂಗುಳಿಯ ಒಂದು ವರಾಂಡ. ಅದು ಥೇಟ್ ಚಿಕ್ಕದೊಂದು ಮಾಲ್‌ನಂತೆಯೇ ಇತ್ತು. ಅಲ್ಲಿ ಬಗೆ ಬಗೆಯ ಖಾದ್ಯಗಳನ್ನು ಮಾರುತ್ತಿದ್ದರು. ಬೇಕರಿ ಇತ್ತು. ಪಾನೀಪೂರಿಯಿಂದ ಹಿಡಿದು ತಂಪು ಪಾನೀಯಗಳ ವರೆಗೆ ಎಲ್ಲಾ ದೊರೆಯುತ್ತಿದ್ದವು. ಅವುಗಳನ್ನು ಜನ ಮುಗಿಬಿದ್ದು ಖರೀದಿಸಿ ತಿನ್ನುತ್ತಿದ್ದರು. ಜಾಗವೇ ಇರದಷ್ಟು ಜನ ಸಂದಣಿ. ಅದು ದೇವಸ್ಥಾನದ ಆವರಣ ಅನ್ನುವ ಯಾವ ಛಾಯೆಯೂ ಅಲ್ಲಿರಲಿಲ್ಲ. ಯಾವುದೋ ಫುಟ್‌ಪಾತ್ ಹೋಟೆಲುಗಳ ಸಂದಿಯಲ್ಲಿ ನಾವಿರುವಂತೆ ಕಂಡು ಬಂತು. ಮೇಲಾಗಿ ಅಲ್ಲಿ ಯಲ್ಲಾ ವಸ್ತುಗಳ ಬೆಲೆಯೂ ತುಂಬಾ ದುಬಾರಿಯಾಗಿದೆ.

ಅಲ್ಲಿಂದ ತಪ್ಪಿಸಿಕೊಂಡು ಆ ಆವರಣದಿಮದ ಹೊರಗೆ ಬಂದಾಗ ಉಚಿತವಾಗಿ ಬಿಸಿಬೇಳೆ ಬಾತ್ ವಿತರಿಸುತ್ತಿದ್ದರು. ಒಳಗೆ ಹಣ ತೆತ್ತು ಹೊಟ್ಟೆ ತುಂಬಿಸಿಕೊಂಡು ಬಂದಿರುವ ಬಹುತೇಕ ಮಂದಿ ಇಲ್ಲಿ ಇದನ್ನು ಪಡೆಯುತ್ತಿರಲಿಲ್ಲ.

ಅಂತೂ ಹೊರಗೆ ಬಂದಾಗ ಮೂಡಿದ ಒಂದೇ ಪ್ರಶ್ನೆ ...
"ಆ ಜೇಬುಗಳ್ಳರು ಯಾರು ???"

ಕಾಮೆಂಟ್‌ಗಳು

Sowmya K A ಹೇಳಿದ್ದಾರೆ…
Nija namagu ide anubhava aythu. adre navu olage enu thegedukondiralilla. adakke uchitha bisi bele bath sikkithu. yochisabekada vishaya.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.