ವಿಷಯಕ್ಕೆ ಹೋಗಿ

ಕತ್ತಿ ಜಳಪಿಸುವರೇ ಶಿವರಾಜ್ ಪಾಟೀಲ್ ?

ವೆಂಕಟಾಚಲಯ್ಯನವರು ಬರುವ ವರೆಗೆ ನಮ್ಮ ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಇರುವುದೇ ಹೆಚ್ಚಿನವರಿಗೆ ತಿಳಿದಿರಲಿಲ್ಲ.  ವೆಂಕಟಾಚಲಯ್ಯನವರ ನಂತರ ಬಂದ ಸಂತೋಷ್ ಹೆಗಡೆಯವರು ಯಾರ ಮುಲಾಜನ್ನೂ ನೋಡದೇ ದೊಡ್ಡ ದೊಡ್ಡ ತಿಮಿಂಗಿಲಗಳನ್ನೇ ಹೆಡೆಮುರಿ ಕಟ್ಟಿದರು. ಇವರಿಂದಾಗಿ "ಕರ್ನಾಟಕ ಲೋಕಾಯುಕ್ತ" ದೇಶದಲ್ಲೇ ನಂ 1 ಆಯ್ತು. ಸಿಬಿಐ ಸಹ ತನ್ನ ವಾರ್ಷಿಕ ಮೀಟಿಂಗ್‌ನಲ್ಲಿ ತನಿಖಾ ಮಾದರಿಗೆ ಕರ್ನಾಟಕ ಲೋಕಾಯುಕ್ತದ ತನಿಖಾ ರೀತಿಯ ಮಾದರಿಯನ್ನು ಅಳವಡಿಸಿಕೊಳ್ಳಲು ಚರ್ಚೆ ನಡೆಸಿದರು. ಈಗ ಬಿಹಾರ್‌ನ ಮುಖ್ಯಮಂತ್ರಿ ನಿತೀಶ್‌ಕುಮಾರ‍್ ತಮ್ಮ ರಾಜ್ಯದ ಲೋಕಾಯುಕ್ತಕ್ಕೆ ಕಾಯಕಲ್ಪ ಕಲ್ಪಿಸಿ ಕೊಡಲು ಸಂತೋಷ್ ಹೆಗಡೆಯವರಿಗೆ ಆಹ್ವಾನ ನೀಡಿದ್ದಾಗಿ ಸುದ್ದಿ ಇದೆ.

ಹೊಸ ಲೋಕಾಯುಕ್ತರಾದ ಶ್ರೀ ಶಿವರಾಜ್‌ ಪಾಟೀಲ್ ಅವರು ಸಂತೋಷ್ ಹೆಗಡೆಯವರಿಗಿಂತಲೂ ಹೆಚ್ಚು ಅಥವಾ ಕಡೇ ಪಕ್ಷ ಅವರಷ್ಟಾದರೂ ಖಡಕ್ ಆಗಿ ಕಾರ್ಯ ನಿರ್ವಹಿಸಬೇಕಾಗಿದೆ. ಅವರ ವೈಖರಿ ನೋಡಿದರೆ ರಾಜ್ಯದ ಜನತೆಗೆ ನಿರಾಶೆ ಮಾಡಲಾರರು ಎಂದೇ ತೋರುತ್ತಿದೆ. ಏಕೆಂದರೆ ಗಣಿ ವರದಿಯಲ್ಲಿ ಯಡ್ಡಿಗೆ ಹೆಗಡೆಯವರು ವಿವರಣೆ ಕೇಳದಿರುವುದು ತಪ್ಪೇನಲ್ಲ, ಕೇಳಲೇಬೇಕಾದ ಅಗತ್ಯ ಇಲ್ಲ ಎಂದು ಹೆಗಡೆಯವರ ಕ್ರಮವನ್ನು ಸಮರ್ಥಿಸಿದ್ದಾರೆ.

ಭ್ರಷ್ಟರ ಪಾಲಿಗೆ ಇವರೂ ಸಹ ದುಸ್ವಪ್ನವಾಗಲಿ... ಇವರಿಗೆ ನಮ್ಮ ಬೆಂಬಲ ಸದಾ ಇರುತ್ತದೆ.

ಕಾಮೆಂಟ್‌ಗಳು

ಗಿರೀಶ್.ಎಸ್ ಹೇಳಿದ್ದಾರೆ…
ಸಂತೋಷ್ ಹೆಗಡೆ ಅವರನ್ನೇ ಇನ್ನೊಂದು ಅವಧಿಗೆ ಮುಂದುವರೆಸಿದ್ದಾರೆ ಚೆನ್ನಾಗಿರುತಿತ್ತು..
Ashok.V.Shetty, Kodlady ಹೇಳಿದ್ದಾರೆ…
ವೆಂಕಟಾಚಲಯ್ಯ, ಸಂತೋಷ್ ಹೆಗ್ಡೆ ಯವರು ಹಾಕಿದ ಹಾದಿಯಲ್ಲೇ ಪಾಟೀಲರು ಮುನ್ನೆಡೆಯಲಿ..ಇನ್ನಷ್ಟು ಭ್ರಷ್ಟ ರಾಜಕಾರಣಿಗಳು ಮತ್ತು ಅಧಿಕಾರಿ ಗಳಿಗೆ ಇವರು ದುಃಸ್ವಪ್ನವಾಗಲಿ..
ಗುಡುಗು ಮಿಂಚು ಹೇಳಿದ್ದಾರೆ…
ಕತ್ತಿ ಜಳಪಿಸುವ ಮುನ್ನವೇ ಒರೆಗೆ ಸುರುವಿಕೊಂಡು ಜಾಗ ಖಾಲಿ ಮಾಡ್ಬಿಟ್ರು.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...