ವಿಷಯಕ್ಕೆ ಹೋಗಿ

ಜನಲೋಕ್‌ಪಾಲ್ ದೀವಿಗೆ !

ಗೆಳೆಯರೇ..... ಗೆಳೆಯರೇ....
ಭಾರತದ ಪ್ರೀತಿವೆತ್ತ ಸ್ನೇಹ ಬಂಧು ಮಿತ್ರರೆ |

ಬನ್ನಿ ಹೆಗಲ ಕೊಡುವ ನಮ್ಮ ಅಣ್ಣನೊಡನೆ ಇಂದು
ಬನ್ನಿ ದೇಶಕ್ಕಾಗಿ ಮೀಸಲಿಡುವ ರಕ್ತ ಬಿಂದು ||
ದೇಶಕ್ಕಿಂದು ಅಂಟಿರುವ ಭ್ರಷ್ಟಾಚಾರ ಕೊಂದು
ಬಲವಾದ ಹೆಜ್ಜೆ ಇಟ್ಟು ನಾವು ನಡೆವ ಮುಂದು ||

ರಕ್ತ ಸುರಿಸಿ ಪ್ರಾಣ ತೆತ್ತು ಪಡೆದರು ಸ್ವಾತಂತ್ರ್ಯ
ಅವರ ಋಣದ ಸಮಾದಿ ಮೇಲೆ ಆಯ್ತು ಗಣತಂತ್ರ ||
ಆಳುತಿರುವ ದೊರೆಗಳಿಗೆ ದುಡ್ಡಿನದೇ ಮಂತ್ರ
ಅಧೋಗತಿಗೆ ಇಳಿದ ದೇಶ ಆಯ್ತು ಅತಂತ್ರ ||

ಅಣ್ಣನಿಗೆ ತಮ್ಮನಾಗಿ ನಮ್ಮ ಸಂತೋಷ್ ಹೆಗಡೆ
ಅರವಿಂದ ಕೇಜ್ರಿವಾಲ ಅವರ ಜೊತೆಗೆ ನಡಿಗೆ ||
ಘರ್ಜಿಸಿದ ದೇಶಪ್ರೇಮಿ ಕಿರಣ್ ಬೇಡಿ ಇಹರು
ಸ್ವಾಮಿ ಅಗ್ನಿವೇಶರೊಡನೆ ಶಾಂತಿಭೂಷಣ್ ತ್ರಯರು ||

ಕಡು ಬಡವರು ಅರೆ ಹೊಟ್ಟೆಗೆ ಪ್ರಾಣ ನೀಗುತಿಹರು
ಕಡು ಭ್ರಷ್ಟರು ನಮ್ಮನಾಳಿ ಕೇಕೆ ಹಾಕುತಿಹರು ||
ನಾವು ಬೀಳಲಾರೆವಿಂದು ರಾತ್ರಿ ಕಂಡ ಬಾವಿಗೆ
ಅಣ್ಣ ತಂಡ ತಂದಿವುದು ಜನಲೋಕ್‌ಪಾಲ್ ದೀವಿಗೆ ||

---------------------------------------------------
ಇಂದು [27.08.2011] ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆದಿದ್ದ ಸುಮಾರು ನಾಲ್ಕೈದು ಸಾವಿರ ಅಣ್ಣಾ ಬೆಂಬಲಿಗರ ಎದುರು ಈ ಹಾಡನ್ನು ಸ್ವತಃ ನಾನೇ ಹಾಡಿದೆ. ಆ ಸಂದರ್ಭದಲ್ಲಿ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗಡೆ ಅವರೂ ಅಲ್ಲಿ ಉಪಸ್ಥಿತರಿದ್ದರು. ತುಂಬಾ ಖುಷಿಯಾಯ್ತು.

ಕಾಮೆಂಟ್‌ಗಳು

Suma ಹೇಳಿದ್ದಾರೆ…
hi sir,
nimma kavana tumba chennagide. spoorti tumbuva hage ide.
Sowmya K A ಹೇಳಿದ್ದಾರೆ…
kavana chennagide.
prasa badhdhavaagiyu ide..
haadannu nanu kelalilwalla anta bejar agta ide...

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...