ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ.
ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು.
ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ.
ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ ?! ಇದ್ಯಾವ ನ್ಯಾಯ ?

ಕಾಮೆಂಟ್‌ಗಳು