ವಿಷಯಕ್ಕೆ ಹೋಗಿ

ತಮಿಳರಿಗೆ ಡಬಲ್ ಧಮಾಕ !

ನಿನ್ನೆ ಚೆನ್ನೈಯಿಂದ ಲಾಲ್‌ಬಾಗ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದೆ. ಟಿಕೇಟು ಕಾಯ್ದಿರಿಸಿರದಿದ್ದ ಕಾರಣ ಸಾಮಾನ್ಯ ಬೋಗಿಯಲ್ಲೇ ಹತ್ತಿದ್ದೆ. ಅದು ಹೆಸರಿಗೆ ಮಾತ್ರ ಎಕ್ಸ್‌ಪ್ರೆಸ್, ಆದರೆ ಬಹುತೇಕ ಎಲ್ಲಾ ನಿಲ್ದಾಣಗಳಲ್ಲೂ ನಿಲ್ಲುತ್ತೆ. ಚೆನ್ನೈ ನಂತರದ ಒಂದು ನಿಲ್ದಾಣದಲ್ಲಿ ಕೆಲವರು ಅಕ್ಕಿ ಮೂಟೆಗಳನ್ನು ಹೇರಿದರು. ಮೂರ್ನಾಲ್ಕು ನಿಲ್ದಾಣಗಳ ನಂತರ ಒಂದು ನಿಲ್ದಾಣದಲ್ಲಿ ಬಂದ ರೈಲ್ವೇ ಪೊಲೀಸರು ಅವುಗಳನ್ನು ವಶಪಡಿಸಿಕೊಂಡರು. ಆಗ ಮೂಟೆಗಳ ವಾರಸುದಾರರು ಯಾರೂ ಮುಂದೆ ಬರಲಿಲ್ಲ.

ರೈಲು ಅಲ್ಲಿಂದ ಹೊರಟ ನಂತರ ಮೂಟೆಗಳನ್ನು ತಂದಿದ್ದವರು 'ಅಷ್ಟು ಕೆ.ಜಿ. ಅಕ್ಕಿ ಇತ್ತು, ಇಷ್ಟು ಕೆ.ಜಿ. ಅಕ್ಕಿ ಇತ್ತು' ಎಂದು ತಮ್ಮ ಅಳಲು ತೋಡಿಕೊಂಡರು. ಆದರೆ ಯಾರ ಮುಖದಲ್ಲೂ ಅಕ್ಕಿ ಹೋದುದರ ದುಃಖ ಕಿಂಚಿತ್ತೂ ಇರದಿದ್ದುದನ್ನು ಕಂಡು ಆಶ್ಚರ್ಯವಾಯ್ತು. ನಂತರ ಅಕ್ಕಪಕ್ಕದವರನ್ನು ವಿಚಾರಿಸಿದೆ. ಆಗ ತಿಳಿದು ಬಂದ ವಿಷಯವೇ ಬೇರೆ.

ಅದೇನೆಂದರೆ ತಮಿಳುನಾಡಿನಲ್ಲಿ ಕರುಣಾನಿಧಿ ಮತ್ತು ಜಯಲಲಿತ ಪೈಪೋಟಿಯಲ್ಲಿ ಮತಬ್ಯಾಂಕ್ ರಾಜಕಾರಣ ಮಾಡಿದ್ದಾರೆ. ಅವುಗಳ ಅಂಗವಾಗಿ ಮನೆ ಮನೆಗೆ ಟಿವಿ, ಮಿಕ್ಸಿ, ಸೀರೆ ಮುಂತಾದ ವಸ್ತುಗಳು ಬಂದಿವೆ. ಜೊತೆಗೆ ಪಡಿತರ ಕಾರ್ಡುದಾರರಿಗೆ ತಿಂಗಳಿಗೆ ೨೦ ಕಿಲೋ ಅಕ್ಕಿ ಉಚಿತ! ಹಲವರು ಒಂದೇ ಕುಟುಂಬಕ್ಕೆ ನಾಲ್ಕೈದು ಕಾರ್ಡು ಹೊಂದಿದ್ದು ಉಚಿತವಾಗಿ ಸಿಗುವ ಕ್ವಿಂಟಾಲ್‌ಗಟ್ಟಲೇ ಅಕ್ಕಿಯನ್ನು ಬೆಂಗಳೂರು ಮುಂತಾದೆಡೆ ತಂದು ಒಳ್ಳೆಯ ಬೆಲೆಗೆ ಮಾರುತ್ತಾರೆ. ಇದು ಅವ್ಯಾಹತವಾಗಿ ನಡೆಯುತ್ತಿದೆ. ರೈಲ್ವೇ ಪೊಲೀಸರು ಆಗಾಗ ವಶಪಡಿಸಿಕೊಂಡರೂ ಸಹ ಕಳೆದುಕೊಂಡವರಿಗೆ ನೋವಿಲ್ಲ... ಕಳೆದುಕೊಂಡಿದ್ದು ಏನೂ ಇಲ್ಲ.. ಏಕೆಂದರೆ ಅದು ಉಚಿತವಾಗಿ ಸಿಕ್ಕಿದ್ದು !

ಕರ್ನಾಟಕದಲ್ಲಿ ವಾಸಿಸುವ ಬಹುತೇಕ ತಮಿಳರು ಅವರ ರಾಜ್ಯದಲ್ಲಿ ಪಡಿತರ ಚೀಟಿ, ಮತದಾರರ ಕಾರ್ಡುಗಳನ್ನು ಹಾಗೆಯೇ ಉಳಿಸಿಕೊಂಡಿದ್ದು ತಿಂಗಳು ತಿಂಗಳೂ ಹೋಗಿ ಅಲ್ಲಿನ ಉಚಿತ ಅಕ್ಕಿ ಪಡೆದು ಇಲ್ಲಿಗೆ ತರುತ್ತಾರೆ. ಕರ್ನಾಟಕ ಸರ್ಕಾರದ ಕದೀಮ ರಾಜಕಾರಣಿಗಳು, ಕಾರ್ಪೋರೇಟರುಗಳು ಇಲ್ಲೂ ಅವರಿಗೆ ಪಡಿತರ ಚೀಟಿ ನೀಡಿದ್ದಾರೆ. ಒಟ್ಟಿನಲ್ಲಿ ತಮಿಳರಿಗೆ ಡಬಲ್ ಧಮಾಕ !

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...