ವಿಷಯಕ್ಕೆ ಹೋಗಿ

ಬಿಎಂಟಿಸಿ ಬಸ್‌ಗಳಿಗೆ ಜಿಪಿಎಸ್ ಅಳವಡಿಸಬೇಕು



ನೀವು ಬೆಂಗಳೂರಿನ ನಗರ ಸಾರಿಗೆಯಲ್ಲಿ ಓಡಾಡಿದ್ದರೆ ನರಕಕ್ಕೆ ಹೋದರೂ ಸುಖವಾಗಿ ಇರಬಲ್ಲಿರಿ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆಯ ಸಮಯವಂತೂ ಜನದಟ್ಟಣೆ ಹೇಳತೀರದು. ನೂರಾರು ಬಸ್‌ಗಳು ಇದ್ದರೂ ಸಹ ನಿಲ್ಲಲಿಕ್ಕೂ ಸಹ ಸ್ಥಳವಿಲ್ಲದಂತಹ ಸ್ಥಿತಿ. ಇದು ಒಂದೆಡೆಯಾದರೆ, ನಮಗೆ ಬೇಕಾದ ಬಸ್‌ ಯಾವ ಸಮಯಕ್ಕೆ ಬರುತ್ತದೆ, ಬರುತ್ತದೋ ಇಲ್ಲವೋ ಎಂಬ ಅನುಮಾನದಲ್ಲೇ ಕಾಯುತ್ತಿರಬೇಕು. ಬಂದರೆ ಹಡೆಯಲು ತಯಾರಾದ ತಾಯಿಯಂತೆ ಹೊಟ್ಟೆ ತುಂಬಿಸಿಕೊಂಡ ಬಸ್‌ಗಳೇ ಬರುತ್ತವೆ. ಅದರಲ್ಲೇ ಜನ ನುಗ್ಗಿ ಹತ್ತಿಕೊಂಡು ಹೋದರೆ ಅದರ ಹಿಂದೆ ಖಾಲಿ ಬಸ್‌ಗಳು ಬರುತ್ತವೆ. 

ಇದನ್ನು ಸರಿಪಡಿಸಲು ಒಂದು ಉಪಾಯವಿದೆ. ನಗರ ಸಾರಿಗೆಯ ಎಲ್ಲಾ ಬಸ್‌ಗಳಿಗೂ ಜಿಪಿಎಸ್ ಅಳವಡಿಸಿ ಅದಕ್ಕಾಗಿ ಒಂದು ಮೊಬೈಲ್ ಆಪ್‌ ಅನ್ನು ಸಿದ್ದಪಡಿಸಿ ಪ್ರಯಾಣಿಕರಿಗೆ ಒದಗಿಸಬೇಕು. ಆ ಆಪ್‌ ಅನ್ನು ಮೊಬೈಲ್‌ನಲ್ಲಿ ಬಳಸುವ ಪ್ರಯಾಣಿಕರು ತಮಗೆ ಬೇಕಾದ ಬಸ್‌ ಮಾರ್ಗ ಸಂಖ್ಯೆಯನ್ನು ಹಾಕಿ ಹುಡುಕಿದರೆ ಆ ಮಾರ್ಗದಲ್ಲಿ ಎಷ್ಟು ಬಸ್‌ಗಳು ಎಲ್ಲೆಲ್ಲಿ ಬರುತ್ತವೆ ಎಂಬುದು ತಿಳಿಯಬೇಕು. ಈ ರೀತಿ ಅನುಕೂಲ ಕಲ್ಪಿಸಿದರೆ ಒಂದು ಬಸ್‌ ಬಂದಾಗ ಎಲ್ಲರೂ ಅದರಲ್ಲೇ ನುಗ್ಗಿ ಹತ್ತುವ ಬದಲಾಗಿ ಹಿಂದೆ ಬರುತ್ತಿರುವ ಬಸ್‌ಗಾಗಿಯೂ ಸ್ವಲ್ಪ ಜನ ಉಳಿಯಬಹುದು. ಅಲ್ಲದೇ ಬಸ್‌ಗಳ ಮಾಹಿತಿ ಮೊಬೈಲ್‌ನಲ್ಲಿಯೇ ದೊರೆಯುವುದರಿಂದ ಸಮಯದ ಉಳಿತಾಯವೂ ಆಗುತ್ತದೆ. ಅನಗತ್ಯವಾಗಿ ಖಾಲಿ ಬಸ್‌ಗಳು ಓಡಾಡುವುದೂ ತಪ್ಪುತ್ತದೆ.

ಈ ವಿಷಯವನ್ನು ನಂದನ್ ನಿಲೇಕಣಿಯವರ 'ಬೆಂಗಳೂರಿಗಾಗಿ ಕಲ್ಪನೆಗಳು' ಎಂಬ ವಿಭಾಗಕ್ಕೆ ತಿಳಿಸಿದ್ದೇನೆ... ನೋಡೋಣ, ಕಾರ್ಯಗತವಾದರೂ ಆಗಬಹುದು. ನಿಮ್ಮದೂ ಏನಾದರೂ ಕಲ್ಪನೆಗಳಿದ್ದಲ್ಲಿ ೦೮೦-೬೭೨೬೪೬೪೫ ಸಂಖ್ಯೆಗೆ ಒಂದು ತಪ್ಪಿದ ಕರೆಯನ್ನು ಕೊಡುವುದರ ಮೂಲಕ ತಿಳಿಸಿ ಪುಣ್ಯ ಕಟ್ಟಿಕೊಳ್ಳಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...