ವಿಷಯಕ್ಕೆ ಹೋಗಿ

ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಮಾಡಿದ ಅನ್ಯಾಯ !



ಸಿದ್ದರಾಮಯ್ಯ ಸರ್ಕಾರ ಮತ್ತೊಂದು ಬಡವರ ವಿರೋಧಿ ನಿರ್ಣಯ ಜಾರಿ ಮಾಡಿದೆ. ಅದೇನೆಂದರೆ ಶೇ. ೨೫% ರಷ್ಟು ಅಲ್ಪ ಸಂಖ್ಯಾತ ಮಕ್ಕಳಿದ್ದರೂ ಸಾಕು, ಆ ಶಾಲೆ/ಕಾಲೇಜಗೆ 'ಅಲ್ಪ ಸಂಖ್ಯಾತರ ಶಿಕ್ಷಣ ಸಂಸ್ಥೆ' ಎಂದು ಮಾನ್ಯತೆ ನೀಡುವುದು. (ಈ ಹಿಂದೆ ಈ ಮಾನ್ಯತೆ ಪಡೆಯಲು ಕನಿಷ್ಟ ಶೇ. ೭೫% ರಷ್ಟು ಅಲ್ಪ ಸಂಖ್ಯಾತ ಮಕ್ಕಳಿರಬೇಕಿತ್ತು).

ಈ ನಿಯಮ ಮೇಲ್ನೋಟಕ್ಕೆ ಅಲ್ಪ ಸಂಖ್ಯಾತರ ಪರ ಅನ್ನಿಸಿದರೂ ದೊಡ್ಡ ನಷ್ಟ ಅಲ್ಪ ಸಂಖ್ಯಾತ ಬಡವರಿಗೇ ಆಗುತ್ತದೆ. ಉದಾ : ಖಾಸಗಿ ಶಿಕ್ಷಣ ಸಂಸ್ಥೆಗಳೆಲ್ಲಾ ದುಡ್ಡಿಗಾಗಿಯೇ ನಡೆಯುತ್ತಿರುವಂತಹವು ಎಂದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ. ಒಂದು ಶಾಲೆಯ ವಿದ್ಯಾರ್ಥಿಗಳ ಸಾಮರ್ಥ್ಯ ೧೦೦ ಎಂದು ಇಟ್ಟುಕೊಳ್ಳೋಣ. ಈ ಶೈಕ್ಷಣಿಕ ವರ್ಷದಲ್ಲಿ ಆ ಶಾಲೆಗೆ ಕನಿಷ್ಟ ೨೫ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳು ಸೇರಿದರೂ ಸಾಕು. ಆ ಸಂಸ್ಥೆಯು 'ತಾನು ಅಲ್ಪ ಸಂಖ್ಯಾತ ಶಿಕ್ಷಣ ಸಂಸ್ಥೆ' ಎಂದು ಪ್ರಮಾಣ ಪತ್ರ ಪಡೆಯಬಹುದು. ಅವರು ಆ ಪ್ರಮಾಣ ಪತ್ರ ಪಡೆಯುವುದರಿಂದ ಬಡವರಿಗಾಗುವ ನಷ್ಟ ಏನು ? ಅದು ವಿಷಯ. ಒಂದು ಸಂಸ್ಥೆ ಈ ಪ್ರಮಾಣ ಪತ್ರ ಪಡೆದ ನಂತರ ಅದು 'ಸಮಾನ ಶಿಕ್ಷಣ ಹಕ್ಕು' ಆರ್‌.ಟಿ.ಇ. ನಿಂದ ಹೊರಗುಳಿಯುತ್ತದೆ. ಅಂದರೆ ಮೇಲ್ಕಂಡ ಶಾಲೆಗೆ ಕನಿಷ್ಟ ೨೫ ಧನಿಕರ ಮಕ್ಕಳು ಸಿಕ್ಕರೆ ಸಾಕು, (ಅದೇನೂ ದೊಡ್ಡ ವಿಷಯವಲ್ಲ) ನಂತರ ಬಡ ಮಕ್ಕಳನ್ನು (ಅವರು ಅಲ್ಪಸಂಖ್ಯಾತರಿದ್ದರೂ) ಪ್ರವೇಶ ನಿರಾಕರಿಸಬಹುದು! ಏಕೆಂದರೆ ಆರ್‌ಟಿಇ ಕಾಯ್ದೆ ಇವರಿಗೆ ಅನ್ವಯವೇ ಆಗುವುದಿಲ್ಲ!

ಈಗ ಯೋಚಿಸಿ, ಸಿದ್ದರಾಮಯ್ಯ ಎಂತಾ ಯಡವಟ್ಟು ಮಾಡಿ ಬಡ ಅಲ್ಪ ಸಂಖ್ಯಾತರಿಗೂ ವಂಚನೆ ಮಾಡುತ್ತಿದ್ದಾರೆ ಅಂತ. ನೂರಕ್ಕೆ ೨೫ ರಷ್ಟು ಧನಿಕರನ್ನು ಶಾಲೆಗೆ ಸೇರಿಸಿಕೊಂಡು ಉತ್ತಮ ಶಿಕ್ಷಣ ನೀಡುತ್ತಾ ೭೫ ರಷ್ಟು ಬಡವರಿಗೆ ಮೋಸ ಮಾಡುವ ದಂಧೆಯಲ್ಲವೇ ಇದು ? ಒಮ್ಮೆ ಒಂದು ಸಂಸ್ಥೆ ಈ ಪ್ರಮಾಣ ಪತ್ರ ಪಡೆದ ಮೇಲೆ ಅವರು ಬಡವರನ್ನೂ ಬಿಡದೇ ಡೊನೇಷನ್ ರೂಪದಲ್ಲಿ ಸುಲಿಯುತ್ತಾರೆ. ಹಿಂದೆ ಇದ್ದ ಶೇ. ೭೫%ರ ನಿಯಮದ ವಿರುದ್ದ ಈ ಸಂಸ್ಥೆಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು. ನ್ಯಾಯಾಲಯವು 'ಈ ಕಾಯ್ದೆಯನ್ನು ಪರಿಶೀಲಿಸಿ' ಎಂದಷ್ಟೇ ಸರ್ಕಾರಕ್ಕೆ ಹೇಳಿತ್ತು. ಸರ್ಕಾರವು ಕಾಯ್ದೆಯ ಪರಿಣಾಮದ ಬಗ್ಗೆ ನ್ಯಾಯಾಲಯಕ್ಕೆ ಮನದಟ್ಟು ಮಾಡಿ ಕೊಡಬೇಕಾಗಿತ್ತು. ಅದನ್ನು ಬಿಟ್ಟು ಅಲ್ಪ ಸಂಖ್ಯಾತ ಬಡ ಮಕ್ಕಳ ಶಿಕ್ಷಣಕ್ಕೆ ಕಲ್ಲು ಹಾಕಿದ್ದು ಸಮಂಜಸವಲ್ಲ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...