ವಿಷಯಕ್ಕೆ ಹೋಗಿ

ಭಾರತ-ಚೀನಾ ಗಡಿ ಸಮಸ್ಯೆ ನಿವಾರಣೆಗೆ ಇದು ಪ್ರಶಸ್ತ ಸಮಯ !



ಬಿಜೆಪಿಗೆ ಭರ್ಜರಿ ಬಹುಮತ ಇರುವುದರಿಂದ ಮೋದಿ ಈ ಬಾರಿ ದೇಶಕ್ಕೆ ಒಂದು ಉಪಕಾರವನ್ನು ಮಾಡಬಹುದು. ಅದೇನೆಂದರೆ ಭಾರತ-ಚೀನಾ ಗಡಿಯನ್ನು ಸ್ಪಷ್ಟವಾಗಿ ತೀರ್ಮಾನಿಸಿ ಸಮಸ್ಯೆಗೆ ಅಂತಿಮ ವಿದಾಯ ಹೇಳುವುದು. ಅರುಣಾಚಲ ಪ್ರದೇಶದ ಬಹುಭಾಗ ಹಿಂದೆ ಚೀನಾಕ್ಕೆ ಸೇರಿದ್ದಾಗಿಯೂ ಅದನ್ನು ತನಗೆ ಬಿಟ್ಟು ಕೊಟ್ಟಲ್ಲಿ ತಾನು ಆಕ್ರಮಿಸಿಕೊಂಡಿರುವ ಅಕ್ಸಾಯ್‌ ಚಿನ್ ಪ್ರಾಂತ್ಯವನ್ನು ಭಾರತಕ್ಕೆ ಬಿಡಲು ತಯಾರಿರುವುದಾಗಿ ನೆಹರು ಪ್ರಧಾನಿಯಾಗಿದ್ದ ಸಮಯದಲ್ಲಿ ಚೀನಾ ಹೇಳಿದ್ದಾಗಿ, ಅದಕ್ಕೆ ನೆಹರು ಒಪ್ಪದಿರುವುದರಿಂದಲೇ ಗಡಿ ಸಮಸ್ಯೆ ಇಂದಿಗೂ ಮುಂದುವರಿದಿರುವುದಾಗಿಯೂ ಒಂದು ಲೇಖನದಲ್ಲಿ ಓದಿದ್ದೆ. ಮೋದಿ ಸರ್ಕಾರ ಈ ವಿಷಯವನ್ನು ರಚನಾತ್ಮಕವಾಗಿ ಪರಿಶೀಲಿಸಿ ಅರುಣಾಚಲ ಪ್ರದೇಶದ ಒಂದಿಷ್ಟು ಭಾಗವನ್ನು ನಾವು ಕಳೆದುಕೊಂಡರೂ (ಅಕ್ಸಾಯ್‌ ಚಿನ್‌ ನಮ್ಮದಾಗುವುದರಿಂದ) ಸಮಸ್ಯೆಯನ್ನು ಕೊನೆಗೊಳಿಸುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು.

ಈ ಸಮಸ್ಯೆಯನ್ನು ಬಗೆ ಹರಿಸಲು ಇದು ಅತ್ಯುತ್ತಮವಾದ ಸಮಯ. ಏಕೆಂದರೆ ಚೀನಾಕ್ಕೆ ಸಹ ತನ್ನ ಬಂಡವಾಳವನ್ನು ತೊಡಗಿಸಲು ಭಾರತಕ್ಕಿಂತಾ ಪ್ರಶಸ್ತ ದೇಶ ಇನ್ನೊಂದಿಲ್ಲ ಎಂಬ ಅರಿವು ಇದೆ. ಭಾರತದಕ್ಕೂ ಬಂಡವಾಳ ಬೇಕು ಅನ್ನುವ ಸಂಕಲ್ಪದಲ್ಲಿ ಮೋದಿ ದೇಶ-ವಿದೇಶ ಸುತ್ತುತ್ತಿದ್ದಾರೆ. ಇದೇ ಸಮಯದಲ್ಲಿ ಗಡಿ ವಿಷಯವನ್ನು ಮುಂದಿಟ್ಟುಕೊಂಡು ಕೂತರೆ ಆ ದೇಶವೂ ಸಮಸ್ಯೆ ಬಗೆಹರಿಸಿಕೊಳ್ಳಲು ಮುಂದಾಗಬಹುದು.
ಮತ್ತು ಬಿಜೆಪಿಗೆ ಸ್ಪಷ್ಟ ಬಹುಮತ ಇರುವುದರಿಂದ ಸ್ವಂತ ನಿರ್ಧಾರದೊಂದಿಗೆ ಸಮಸ್ಯೆಗೆ ಕೊನೆ ಹಾಡಬಹುದು. ವಿರೋಧ ಪಕ್ಷಗಳ ಗೊಂದಲವಿರುವುದಿಲ್ಲ.

ಮುಂದೆಂದಾದರೂ ಯಾವ ಪಕ್ಷಕ್ಕಾದರೂ ಇಷ್ಟೊಂದು ಬಹುಮತ ಬರುತ್ತದೋ ಇಲ್ಲವೋ ಗೊತ್ತಿಲ್ಲ. ಬೇರೆ ಪಕ್ಷಗಳಿಗೆ ಬಹುಮತ ಬಂದರೂ ಅವು ಗಡಿ ವಿಷಯದಲ್ಲಿ ಮುಂದುವರಿಯುವಂತಿಲ್ಲ, ಕಾರಣ ಮೇಲೆ ತಿಳಿಸಿದ ರೀತಿಯ ಪ್ರಸ್ತಾಪವನ್ನು ಬಿಜೆಪಿಯೇತರ ಸರ್ಕಾರ ಮಾಡಿದ್ದೇ ಹೌದಾದರೆ ಮೋದಿಭಕ್ತರು ಆಕಾಶ ಭೂಮಿ ಒಂದು ಮಾಡುತ್ತಾರೆ. ಆದ್ದರಿಂದ ಈ ಬಾರಿ ಮೋದಿಯವರು ಇದನ್ನು ಮಾಡುವುದೇ ಸೂಕ್ತ. ಅರುಣಾಚಲಪ್ರದೇಶದ ಭಾಗವನ್ನು ಬಿಟ್ಟು ಕೊಡಲು ಹೊರಟರೆ ಅದೇ ಮೋದಿಭಕ್ತರು ಸುಮ್ಮನಿರುತ್ತಾರಾ? ಅನುಮಾನವೇ ಬೇಡ... ಮೋದಿ ದೇಶವನ್ನೇ ಮಾರಿದರೂ ಅವರು ಮರು ಮಾತಾಡುವುದಿಲ್ಲ ! ಕಾರಣ ಇನ್ನೂ ಮೋದಿ ಜ್ವರ ಇಳಿದಿಲ್ಲ!

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...