ವಿಷಯಕ್ಕೆ ಹೋಗಿ

ಜನ-ಧನ್‌ ಹಾಗೂ ಆಧಾರ್‌ !



ಮೊನ್ನೆ ಮೊನ್ನೆ ಕೆಂದ್ರ ಸರ್ಕಾರದ ಜನ-ಧನ್ ಯೋಜನೆಯಲ್ಲಿ ಕೋಟ್ಯಾಂತರ ಜನರಿಗೆ  ಬ್ಯಾಂಕ್‌ ಖಾತೆ ನೀಡಲಾಯ್ತು. ಪ್ರತಿಯೊಬ್ಬ ಪ್ರಜೆಗೂ ಒಂದು ಬ್ಯಾಂಕ್‌ ಖಾತೆ ಇರಲೇ ಬೇಕು, ಹಾಗಾಗಿ ಇದೊಂದು ಅತ್ಯುತ್ತಮ ಯೋಜನೆ. 
ಆದರೆ ಇದನ್ನು ಜಾರಿಗೊಳಿಸಿದ ರೀತಿಯಲ್ಲಿನ ಯಡವಟ್ಟು ನೋಡಿ...
ಈ ಯೋಜನೆಯ ಪ್ರತಿಫಲ ಸಿಗಬೇಕಾಗಿದ್ದುದು ಈ ಮೊದಲೇ ಬ್ಯಾಂಕ್‌ ಖಾತೆ ಹೊಂದಿಲ್ಲದಿರುವವರಿಗೆ ಮಾತ್ರ. ಆದರೆ ಮೊದಲೇ ಬ್ಯಾಂಕ್‌ ಖಾತೆ ಇದ್ದವರೂ ಈ ಯೋಜನೆಯಡಿ ಲಕ್ಷಾಂತರ ಜನರು ಮತ್ತೊಂದು ಖಾತೆ ಮಾಡಿಸಿಕೊಂಡಿದ್ದಾರೆ ಎಂಬುದು ಈಗ ಸರ್ಕಾರದ ಅರಿವಿಗೆ ಬಂದಿದೆ. (ಹೀಗಾಗುತ್ತದೆ ಎಂದು ಮೊದಲೇ ತಿಳಿದಿರಲಿಲ್ಲ ಎನ್ನಲಾಗದು, ಸಂಖ್ಯೆಯ ಲಾಭ ಪಡೆಯಲು ಸುಮ್ಮನಾಗಿದ್ದಿರಲೂ ಬಹುದು.) ಈಗ ಅಂತಹ ಖಾತೆದಾರರನ್ನು ಹೊರ ಹಾಕಲು ಇನ್ನೊಂದು ಮೂರ್ನಾಲ್ಕು ತಿಂಗಳು ಬೇಕಾಗುತ್ತದೆ ಎಂಬ ಸುದ್ದಿ ಬಂದಿದೆ. ಅದು ಆರು ತಿಂಗಳೋ ವರ್ಷವೋ ಹಿಡಿದರೆ ಅಚ್ಚರಿಯೇನಲ್ಲ, ಅಥವಾ ಎಷ್ಟರ ಮಟ್ಟಿಗೆ ಸರಿಯಾದ ಫಲಾನುಭವಿಗಳನ್ನು ಮಾತ್ರ ಉಳಿಸಿಕೊಳ್ಳುತ್ತಾರೆ ಎಂಬುದನ್ನಂತೂ ಕೇಳುವುದೇ ಬೇಡ.
ಆದರೆ ಕೇಂದ್ರ ಸರ್ಕಾರ ಈ ರೀತಿ ಮಾಡಿದಿದ್ದರೆ ???
ಹೇಗಿದ್ದರೂ ಆಧಾರ್‌ ಕಾರ್ಡ್‌ ನೀಡಿದರೆ ಬೇರೆ ಯಾವುದೇ ದಾಖಲೆ ಬೇಡ ಅಂತ ತಿಳಿಸಿದ್ದರು. ಅದನ್ನೇ ಆಧಾರ್‌ ಕಾರ್ಡ್‌ ಇದ್ದವರಿಗೆ ಮಾತ್ರ ಈ ಯೋಜನೆ ಅನ್ವಯ ಅಂತ ಕಡ್ಡಾಯ ಮಾಡಿದ್ದಿದ್ದರೆ ? ಅದಕ್ಕೂ ಮೊದಲು ಬ್ಯಾಂಕ್‌ ಖಾತೆ ಇರುವವರೆಲ್ಲಾ ಆಧಾರ್‌ ಕಾರ್ಡ್‌ ಹೊಂದಿರಲೇ ಬೇಕು ಎಂದು ಕಡ್ಡಾಯ ಮಾಡಿದ್ದಿದ್ದರೆ? ಅಂದು ಅರ್ಜಿ ನೀಡಿದಾಗಲೇ ಐದು ಸೆಕೆಂಡಿನಲ್ಲಿ ಅರ್ಜಿದಾರರು ಇನ್ನೊಂದು ಬ್ಯಾಂಕ್‌ ಖಾತೆ ಹೊಂದಿದ್ದಾರೋ ಇಲ್ಲವೋ ಎಂಬುದು ತಿಳಿದು ಹೋಗಿರುತ್ತಿತ್ತು. ಈ ಯೋಜನೆಯನ್ನು ಇನ್ನೊಂದು ೩-೬ ತಿಂಗಳು ಮುಂದೂಡಿ ಆಧಾರ್‌ ಕಾರ್ಡ್‌‌ನ್ನು ಎಲ್ಲರಿಗೂ ವಿತರಿಸಿದ ನಂತರವೇ ಜಾರಿಗೊಳಿಸಬಹುದಿತ್ತು.
ಇನ್ನಾದರೂ ಕೇಂದ್ರ-ರಾಜ್ಯ ಸರ್ಕಾರಗಳು ಆಧಾರ್‌ ಅನ್ನು ಎಲ್ಲಾ ಇಲಾಖೆ/ಯೋಜನೆಗಳಿಗೂ ಕಡ್ಡಾಯ ಮಾಡಲಿ. ದೇಶವನ್ನು ಭ್ರಷ್ಟರಿಂದ ರಕ್ಷಿಸಲಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...