ವಿಷಯಕ್ಕೆ ಹೋಗಿ

ಬಂಡೆ ಸಾವು ಮರೆಯುವ ಮುನ್ನವೇ ಬಂದಿದೆ ಹೆಬ್ಬಂಡೆ ಸಾವಿನ ಸುದ್ದಿ !

ಹೌದು, ಕಳೆದ ವರ್ಷದ ಜನವರಿಯಲ್ಲಷ್ಟೇ ಕಲಬುರ್ಗಿಯ ಪ್ರಾಮಾಣಿಕ ಪೊಲಿಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡಿ ಎಂಬುವರು ಅನುಮಾನಾಸ್ಪದವಾಗಿ ರೌಡಿಯೊಬ್ಬನ ಗುಂಡಿಗೆ ಬಲಿಯಾಗಿದ್ದರು. ಅದರ ತನಿಖೆ ಸರಿ ಸುಮಾರಾಗಿ ಹಳ್ಳ ಹಿಡಿದೇ ಹೋಯ್ತು. ಅಷ್ಟರಲ್ಲಾಗಲೇ ಇನ್ನೊಬ್ಬ ನಿಷ್ಟಾವಂತೆ ಅಧಿಕಾರಿಯಾಗಿದ್ದ ಡಿ.ಕೆ. ರವಿಯವರು ಕೂಡಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇದು ರಾಜ್ಯಕ್ಕಾದ ದೊಡ್ಡ ನಷ್ಟವೆಂದೇ ಹೇಳಬೇಕು.



ಅಪ್ರತಿಮ ಪ್ರಾಮಾಣಿಕ ಅಧಿಕಾರಿಯಾಗಿದ್ದ ರವಿಯವರು ಜಿಲ್ಲಾಧಿಕಾರಿಯಾಗಿ ಕೋಲಾರಕ್ಕೆ ಸಲ್ಲಿಸಿದ ಸೇವೆ ಅಪಾರ. ಅಲ್ಲಿನ ಬಡ ಬಗ್ಗರ ನೋವಿಗೆ ಮಿಡಿದ ಅವರನ್ನು ಜನ ಎಂದೆಂದೂ ಮರೆಯಲಾರರು. ಅಲ್ಲಿನ ಮರಳು ಮಫಿಯಾವನ್ನು ಬುಡ ಸಮೇತ ಕಿತ್ತು ಹಾಕಿ ರೌಡಿಗಳ, ಕಾಳದಂಧೆ ಕೋರರ ಪಾಲಿಗೆ ಸಿಂಹ ಸ್ವಪ್ನವೇ ಆಗಿದ್ದರು. ಭೂ ಒತ್ತುವರಿದಾರರನ್ನು ಅಟ್ಟಾಡಿಸಿಕೊಂಡು ಸದೆ ಬಡಿದರು. ಇದರಿಂದ ಸಂಕಷ್ಟಕ್ಕೊಳಗಾದ ಹಲಾಲುಕೋರರು ಸಿದ್ದರಾಮಯ್ಯನವರ ಮನವೊಲಿಸಿ ರವಿಯವರನ್ನು ಕೋಲಾರದಿಂದ ಎತ್ತಂಗಡಿ ಮಾಡಿಸುವ ವ್ಯವಸ್ಥೆ ಮಾಡಿದರು. ಇದನ್ನು ತಿಳಿದ ಜಿಲ್ಲೆಯ ಜನತೆ ಜಿಲ್ಲಾಧಿಕಾರಿಯ ವರ್ಗಾವಣೆ ವಿರುದ್ದ ಬೀದಿಗಿಳಿದು ಹೋರಾಟ ಮಾಡಿದರು. ಒಬ್ಬ ಜಿಲ್ಲಾಧಿಕಾರಿಯನ್ನು ಬೇರೆಡೆಗೆ ವರ್ಗಾಯಿಸದಂತೆ ಜನರೇ ಒತ್ತಾಯಿಸಿ ಹೋರಾಟ ಮಾಡಿರುವುದು ಬಹುಶಃ ರವಿಯವರಿಗಾಗಿ ಮಾತ್ರ ಅನ್ನಿಸುತ್ತದೆ. 

ಕೋಲಾರದಿಂದ ಬೆಂಗಳೂರಿಗೆ
ಆದರೆ ಸಿದ್ದರಾಮಯ್ಯ ಜನರ ಬೇಡಿಕೆಗೆ ಬೆಲೆಯನ್ನೇ ಕೊಡಲಿಲ್ಲ. ರವಿಯವರನ್ನು ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿದರು. ಇದರಲ್ಲಿ ಸಿದ್ದರಾಮಯ್ಯನವರ ತಂತ್ರ ಎದ್ದು ಕಾಣಿಸುತ್ತಿದೆ. ಏಕೆಂದರೆ ವಾಣಿಜ್ಯ ತೆರಿಗೆ ಆಯುಕ್ತರಿಗೆ ಸಹಿ ಹಾಕುವುದು ಬಿಟ್ಟು ಹೇಳಿಕೊಳ್ಳುವಂತಹ ಕೆಲಸಗಳೇನೂ ಇರುವುದಿಲ್ಲ. ತೆರಿಗೆ ಸಂಗ್ರಹವನ್ನು ಕೆಳಗಿನ ಅಧಿಕಾರಿಗಳೇ ನೋಡಿಕೊಳ್ಳುತ್ತಾರೆ. ಹಾಗಾಗಿ ರವಿಯವರನ್ನು ಉತ್ತಮ ಹುದ್ದೆ ನೀಡುವ ಸಬೂಬಿನಲ್ಲಿ ಅವರನ್ನು ಕಟ್ಟಿ ಹಾಕುವ ಹುನ್ನಾರ ಇದರಲ್ಲಿ ಇದ್ದಿತೆಂದೇ ಹೇಳಬೇಕಾಗುತ್ತದೆ. 

ಆದರೆ ಸಿಂಹ ಯಾವ ಕಾಡಿನಲ್ಲಿದ್ದರೂ ಸಿಂಹವಾಗಿಯೇ ಘರ್ಜಿಸುತ್ತದೆ ಎಂಬುದಕ್ಕೆ ರವಿ ನಿದರ್ಶನವಾದರು. ವಾಣಿಜ್ಯ ತೆರಿಗೆಯನ್ನು ವಂಚಿಸುತ್ತಿದ್ದ ದೊಡ್ಡ ದೊಡ್ಡ ಸಂಸ್ಥೆಗಳ ಕಚೇರಿಗಳಿಗೆ ರವಿಯವರೇ ಸ್ವತಃ ದಾಳಿ ನಡೆಸ ತೊಡಗಿದರು. ಸುಳ್ಳು ಲೆಕ್ಕ ತೋರಿಸಿ ತೆರಿಗೆ ವಂಚಿಸುತ್ತಿದ್ದ ಸಂಸ್ಥೆಗಳನ್ನು ಹೆಡೆಮುರಿ ಕಟ್ಟಿ ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲಿ ಸರ್ಕಾರಕ್ಕೆ ಬರೋಬ್ಬರಿ ೧೨೫ ಕೋಟಿ ರೂಪಾಯಿಗಳನ್ನು ವಸೂಲಿ ಮಡಿ ಕೊಟ್ಟಿದ್ದರು. 

ಇದರಿಂದ ಮತ್ತೆ ಹಲಾಲುಕೋರರು ಆತಂಕಗೊಂಡಿದ್ದುದರಲ್ಲಿ ಅನುಮಾನವಿಲ್ಲ. ದುಬೈನಲ್ಲಿ ಕುಳಿತಿರುವ ಡಾನ್‌ಗಳಿಂದ ರವಿಯವರಿಗೆ ಬೆದರಿಕೆ ಕರೆಗಳನ್ನು ಮಾಡಿಸಿದ್ದರು ಎಂದೂ ಹೇಳಲಾಗುತ್ತಿದೆ. ಆದರೆ ರವಿ ಯಾವುದಕ್ಕೂ ಜಗ್ಗಿರಲಿಲ್ಲ.

ಆದರೆ ಏನಾಯ್ತು...?
ಆದರೆ ರವಿಯವರ ಜೀವನ ಧಗ್ಗನೆ ಮಿನುಗಿ ಮರೆಯಾಗಿ ಹೋದ ಮಿಂಚಿನಂತಾಗಿ ಹೋಯ್ತು. ಧಗಧಗಿಸಿ ಉರಿದ ಬೆಂಕಿ ನೋಡ ನೋಡುತ್ತಿರುವಂತೆಯೇ ಆರಿ ಹೋದಂತೆ ನಿನ್ನೆ (೧೬-೦೩-೨೦೧೫) ಅವರು ಅನುಮಾನಾಸ್ಪದ ರೀತಿಯಲ್ಲಿ ತಮ್ಮ ಅಪಾರ್ಟ್‌‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡರೂ ಅದನ್ನು ನಂಬಲಾಗುತ್ತಿಲ್ಲ. ಅಂತಹ ಎಂಟೆದೆಯ ಬಂಟನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಕಾರಣಗಳಾದರೂ ಏನಿದ್ದವು? ಅಲ್ಲದೇ ಹೈಸ್ಕೂಲು ಓದುವ ಹುಡುಗಿಯರು ಆತ್ಮಹತ್ಯೆ ಮಾಡಿಕೊಂಡರೂ ಒಂದು ಡೆತ್‌ನೋಟ್‌ ಬರೆದಿಡುತ್ತಾರೆ. ಆ ಮೂಲಕ ತಮ್ಮ ಮನೆಯವರಿಗೆ, ಆತ್ಮೀಯರಗೆ ವಿದಾಯ ಹೇಳುತ್ತಾರೆ. ಆದರೆ ರವಿಯವರ ಕೋಣೆಯಲ್ಲಿ ಯಾವ ಪತ್ರವೂ ದೊರೆತಿಲ್ಲ. ಐಎಎಸ್‌ ಅಧಿಕಾರಿಯೊಬ್ಬ ಡೆತ್‌ನೋಟ್‌ ಬರೆಯದೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂದರೆ ನಂಬಲಸಾಧ್ಯ. ಹಾಗೆಯೇ ಕೊಲೆ ನಡೆದಿದ್ದರೂ ಅವರನ್ನು ಎತ್ತಿ ನೇಣಿಗೆ ಹಾಕುವುದು ಒಬ್ಬಿಬ್ಬರಿಂದ ಆಗುವ ಕೆಲಸವೂ ಅಲ್ಲ. ಹೆಚ್ಚು ಜನರು ಸರಾಗವಾಗಿ ಒಳ ಹೋಗಿ ಬಿಡಬಹುದಾದಂತಹ ಆಪಾರ್ಟ್‌‌ಮೆಂಟ್‌ ಸಹ ಅದಲ್ಲ. ಹಾಗಿದ್ದರೆ ನಿಜಕ್ಕೂ ಏನು ನಡೆಯಿತು ? ಹೇಳೋದು ಕಷ್ಟ.

ಸರಿಯಾದ ತನಿಖೆ ಮಾತ್ರ ಇದಕ್ಕೆ ಉತ್ತರಿಸಬಲ್ಲುದು. ಪ್ರಶ್ನೆ ಇರೋದು ಅಂತಹ ತನಿಖೆ ನಡೆಯುತ್ತಾ ? ಅಥವಾ ಬಂಡೆ ಸಾವಿನಂತೆಯೇ ಈ ಹೆಬ್ಬಂಡೆಯ ಸಾವನ್ನೂ ಮುಚ್ಚಿ ಹಾಕುತ್ತಾರಾ ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...