ವಿಷಯಕ್ಕೆ ಹೋಗಿ

ಕರ್ನಾಟಕಕ್ಕಾಗಿ ಬಿಹಾರದಲ್ಲಿ ನಿತೀಶ್‌ಕುಮಾರ್‌ ಗೆಲ್ಲಬೇಕಾಗಿದೆ !



ಬಿಹಾರ ಚುನಾವಣೆಯಲ್ಲಿ ನನ್ನ ನೆಚ್ಚಿನ ನಿತೀಶ್‌ ಕುಮಾರ್‌ ಜಯ ಗಳಿಸಲಿ ಎಂದು ಆಸಿಸುವೆ.
ನಿತೀಶ್‌ ಬರುವ ಮೊದಲು ಬಿಹಾರ ಕೆಟ್ಟು ಕೆರ ಹಿಡಿದು ಹೋಗಿತ್ತು. ಲಾ & ಆರ್ಡರ್‌ ಮಣ್ಣು ಪಾಲಾಗಿತ್ತು. ಸ್ವತಃ ಪೊಲೀಸರೇ ದರೋಡೆ, ಅತ್ಯಾಚಾರಕ್‌ಇಳಿದ ಅನೇಕ ಪ್ರಕರಣಗಳು ವರದಿಯಾಗುತ್ತಿದ್ದವು. ದೂರದ ಕರ್ನಾಟಕದ ಪತ್ರಿಕೆಗಳಲ್ಲೂ ದಿನ ನಿತ್ಯ ಬಿಹಾರದ ಒಂದಿಲ್ಲೊಂದು ಸಮಾಜ ಘಾತಕದ ಸುದ್ದಿ ಇದ್ದೇ ಇರುತ್ತಿತ್ತು. ಹಾಗೆಯೇ ಅಲ್ಲಿನ ಅರಾಜಕತೆಯಿಂದ ಬೇಸತ್ತು ಮತ್ತು ಕೆಲಸವೇ ಇಲ್ಲದೇ ಲಕ್ಷಾಂತರ ಜನರು ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ವಲಸ ಬಂದು ಇಲ್ಲಿನ ಸ್ಥಳೀಯರ ಸಮಸ್ಯೆಯನ್ನು ಹೆಚ್ಚಿಸಿದ್ದರು.

ಆದರೆ ನಿತೀಶ್‌ಕುಮಾರ್‌ ಮುಖ್ಯಮಂತ್ರಿಯಾದ ನಂತರ ಬಿಹಾರದ ಚಿತ್ರಣವನ್ನೇ ಬದಲಿಸಿದರು. ಅಲ್ಲಿ ಮೊದಲು ಲಾ & ಆರ್ಡರ್‌ ಸರಿಪಡಿಸಲಾಯ್ತು. ನಂತರ ಚಿಕ್ಕಪುಟ್ಟ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಿ ಉದ್ಯೋಗವಕಾಶಗಳನ್ನು ಹೆಚ್ಚಿಸಲಾಯ್ತು. ಅಲ್ಲಿ ಯಾವ ಮಟ್ಟಿಗೆ ಬದಲಾವಣೆ ಆಯ್ತು ಎಂದರೆ ವಲಸೆ ಬಂದ ಬಿಹಾರಿಗಳಿಂದಲೇ ನಡೆಯುತ್ತಿದ್ದ ಬೆಂಗಳೂರಉ ಚೆನ್ನೈನಂತಹ ನಗರಗಳ ಬೃಹತ್‌ ಕಟ್ಟಡಗಳ ಕೆಲಸಕ್ಕೆ ಕ್ರಮೇಣ ಬಿಹಾರಿಗಳ ಕೊರತೆ ಎದುರಾಯ್ತು. (ಈಗ ಅವರ ಜಾಗದಲ್ಲಿ ಉತ್ತರ ಪ್ರದೇಶದವರೂ, ಹರಿಯಾಣ, ಒಡಿಶಾ, ಆಂಧ್ರದವರೂ ತುಂಬಿಕೊಂಡಿದ್ದಾರೆ). ಒಬ್ಬ ಮುಖ್ಯಮಂತ್ರಿ ಮಾಡಬೇಕಾದ ಕೆಲಸವೇ ಅದು. ಈ ಕಾರಣಕ್ಕೆ ನಿತೀಶ್‌ ನನಗೆ ಇಷ್ಟವಾಗುತ್ತಾರೆ, ಅದಕ್ಕಿಂತ ಮಿಗಿಲಾಗಿ ಅವರೊಬ್ಬ ಸಜ್ಜನ ಮತ್ತು ಸಮಾಜವಾದಿ. 

ಅವರು ಗೆಲ್ಲಬೇಕು. ಅವರು ಗೆಲ್ಲದೇ ಹೋದರೆ ಮತ್ತೆ ಅಲ್ಲಿ ಯಾವ ಸರ್ಕಾರ ಬಂದು ಮರಳಿ ಬಿಹಾರ ದಾರಿ ತಪ್ಪುವುದೋ ಹೇಳಲಾಗದು. ಹಾಗೇನಾದರೂ ನಡೆದರೆ ಮತ್ತೆ ಬೆಂಗಳೂರು ಮತ್ತು ಕರ್ನಾಟಕ ಬಿಹಾರಿಗಳ ದಾಂಗುಡಿಗೆ ತುತ್ತಾಗಿ ಸಮಸ್ಯೆ ಎದುರಿಸಲಿದೆ. ಹಾಗಾಗಿ ಈ ಬಾರಿ ಬಿಹಾರಕ್ಕಿಂತಲೂ ಹೆಚ್ಚಾಗಿ ನಮಗಾಗಿಯಾದರೂ ನಿತೀಶ್‌ಕುಮಾರ್‌ ಗೆಲ್ಲಲೇ ಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...