ವಿಷಯಕ್ಕೆ ಹೋಗಿ

ಚಿತ್ರಮಂದಿರಗಳಲ್ಲಿ ಯಾರ್‌ ಯಾರ ಬಾಯಲ್ಲಿ "ಜ್ವಳ ಜ್ವಳ" ಆಗಲಿದೆಯೋ...



ನಾವು ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಹೆಚ್ಚಾಗಿ ಗುಂಪಲ್ಲಿ ಗೋವಿಂದ ಆಗಿ ಹಾಡುವುದೇ ಹೆಚ್ಚು. ಅದೇ ಒಬ್ಬೊಬ್ಬರನ್ನೇ ನಿಲ್ಲಿಸಿ ಹಾಡು ಅಂದರೆ ಯಾರಿಗೂ ಸರಿಯಾಗಿ ಬರುತ್ತಿರಲಿಲ್ಲ.

ಹೀಗಿರಲೊಮ್ಮೆ ನಮ್ಮ ಶಾಲೆಗೆ ಹಾವೇರಿ ಕಡೆಯ ಕಡಕ್‌ ಮುಸ್ಲಿಂ ಮೇಷ್ಟ್ರು ವರ್ಗ ಆಗಿ ಬಂದ್ರು. ಬಂದ ಮೊದಲ ದಿನವೇ "ಬಡಿಗಿ ತರ‍್ರಲೇ" ಅಂತ ಒಂದು ದೊಡ್ಡ ಕೋಲು ತರಿಸಿ ಇಟ್ಟುಕೊಂಡು ಬಡಿಯತೊಡಗಿದರು. ಪ್ರತಿಯೊಂದಕ್ಕೂ ಭಯಂಕರ ಸ್ಟ್ರಿಕ್ಟು. 

ಒಂದು ದಿನ ರಾಷ್ಟ್ರಗೀತೆ ಹೇಳುತ್ತಿರುವಾಗ ಅವರಿಗೆ ಯಾರೋ ಸರಿಯಾಗಿ ಹೇಳುತ್ತಿಲ್ಲ ಅನ್ನೋ ಅನುಮಾನ ಬಂದಿದೆ. ಒಂದೆರಡು ದಿನ ಗಮನಿಸಿದವರು ಕೊನೆಗೂ ಯಾರು ತುಂಬಾ ತಪ್ಪಾಗಿ ಹೇಳುತ್ತಾರೆ ಅಂಗ ಗೊತ್ತು ಮಾಡಿ ಆ ಹುಡುಗನಿಗೆ "ನೀನೊಬ್ನೇ ಹೇಳಲೇ ರಾಷ್ಟ್ರಗೀತೆನಾ" ಅಂದ್ರು.

ಸರಿ ಅವ ಸುರು ಮಾಡಿದ..

"ಜನ ಗಣ ಮನ ಅದಿ ನಾಯಕ ಜಯ ಹೇ..."
...
...
"ಉಚ್ಚಲ ಜಲದಿ ತರಂಗ" ಅನ್ನೋ ಸಾಲನ್ನು "ಉಚ್ಚೆಲ್ಲ ಜ್ವಳ ಜ್ವಳ ಲಂಗ!" ಅಂದು ಬಿಟ್ಟ. ಮೇಷ್ಟ್ರು ಬಡಿಗೆ ಹಿಡಿದೇ ನಿಂತಿದ್ರು. ಅಂಡಿನ ಮೇಲೆ ಚೆನ್ನಾಗಿ ಬಡಿದ್ರು. ಅದಾದ ನಂತರ ಎಲ್ಲರಿಗೂ ರಾಷ್ಟ್ರಗೀತೆ ಸರಿಯಾಗಿ ಬಾಯಿಪಾಠ ಮಾಡಿಸಿದ್ರು.

ಅದೆಲ್ಲಾ ಆಗಿ ಈಗ...
ಚಿತ್ರಮಂದಿರಗಳಲ್ಲಿ ಯಾರ್‌ ಯಾರ ಬಾಯಲ್ಲಿ "ಜ್ವಳ ಜ್ವಳ" ಆಗಲಿದೆಯೋ... 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...