ವಿಷಯಕ್ಕೆ ಹೋಗಿ

ವೇಶ್ಯಾವೃತ್ತಿ ಕಾನೂನುಬದ್ದಗೊಳ್ಳಲಿ...


ಕೆಲವು ವರ್ಷದ ಹಿಂದೆ ಒಬ್ಬರು ಕನ್ನಡದ ನಟಿ ( ತಾರಾ ಅವರು ಅಂತ ನೆನಪು ) "ವೇಶ್ಯಾವಾಟಿಕೆ ಯನ್ನು ಕಾನೂನು ಬದ್ಧಗೊಳಿಸಬೇಕು" ಅಂತ ಹೇಳಿದ್ದರು. ಅದನ್ನು ಅಂದು ಬಹಳಷ್ಟು ಮಂದಿ ವಿರೋಧ ಮಾಡಿದ್ದರು. ಅದನ್ನು ನಾನು ಬೆಂಬಲಿಸಿ ಫೇಸ್‌ಬುಕ್‌ನಲ್ಲಿ ಹಂಚಿಕೆ ಮಾಡಿದಾಗ ಅಲ್ಲಿಯೂ ತುಂಬಾ ಜನ ವಿರೋಧ ಮಾಡಿದ್ದರು. "ನಿನ್ನ ಅಕ್ಕ, ತಂಗಿ ಆ ವೃತ್ತಿಯಲ್ಲಿ ಇದ್ದಿದ್ದರೂ ಹೀಗೆ ಬೆಂಬಲ ಕೊಡುತಿದ್ಯಾ?" ಅಂತಲೂ ಕೇಳಿದ್ದರು. ವೇಶ್ಯಾವಾಟಿಕೆ ನಿರ್ಮೂಲನೆ ಹೇಗೆ ? ಅಂತ ತಿರುಗಿ ಕೇಳಿದರೆ ಅದಕ್ಕೆ ಕಾನೂನು ಇದೆಯಲ್ಲ ಅಂದಿದ್ದರು.. 

ಅದಾಗಿ ಐದಾರು ವರ್ಷಗಳೇ ಕಳೆದಿವೆ. ಈಗಲೂ ವೇಶ್ಯಾವಾಟಿಕೆ ಯಲ್ಲಿ ನಮ್ಮ ರಾಜ್ಯದಲ್ಲೇ ಒಂದು ಲಕ್ಷಕ್ಕೂ ಹೆಚ್ಚು ಮಂದಿ ತೊಡಗಿಸಿಕೊಂಡಿದ್ದಾರೆ ಅನ್ನೋ ವರದಿ ಬಂದಿದೆ !! ವೇಶ್ಯಾವಾಟಿಕೆ ವಿರೋಧಿ ಕಾನೂನು ಹಾಗೆಯೇ ಇದೆ, ಆದರೆ ಆ ದಂದೆ ಮಾತ್ರ ನಿಂತಿಲ್ಲ. ಅದರಲ್ಲಿ ತೊಡಗಿಸಿಕೊಂಡಿರುವ ಆ ಲಕ್ಷಕ್ಕೂ ಹೆಚ್ಚು ಮಹಿಳೆಯರ ಮಾಹಿತಿ ಯಾರ ಬಳಿಯೂ ಇಲ್ಲ ! ಅವರಿಂದ ಬರುವ ಆದಾಯ ಅವರಿಗೇ ಸಿಗುತ್ತಿದೆ ಅಂತ ಯಾರಾದರೂ ಹೇಳಲು ಸಾದ್ಯವೇ ? ವಿಟರಿಂದ, ಪೊಲೀಸರಿಂದ ಮತ್ತು ದಂದೆ ನಡೆಸುವವರಿಂದ ನಡೆಯುತ್ತಿರುವ ದೌರ್ಜನ್ಯವನ್ನು ಯಾರು ತಡೆಯಲು ಸಾಧ್ಯ ಹೇಳಿ. 'ಕೊಳಕು ಎಷ್ಟಾದರೂ ಇರಲಿ, ಅದು ಎದುರಿಗೆ ಕಾಣಿಸದಿದ್ದರೆ ಸಾಕು' ಅನ್ನುವಂತಿದೆ ಇವರು ಹೇಳುವುದು.
[ ಕೃಪೆ : ಪ್ರಜಾವಾಣಿ ೧೫ ಜುಲೈ ೨೦೧೭ ]

ವೇಶ್ಯಾವಾಟಿಕೆಯನ್ನು ಕಾನೂನುಬದ್ಧ ಗೊಳಿಸುವ ಮೂಲಕ ಆ ವೃತ್ತಿಯಲ್ಲಿ ಇರುವವರಿಗೆ ಹಲವಾರು ಅನುಕೂಲಗಳನ್ನು ಮಾಡಿಕೊಡಬಹುದು.

೧. ಯಾರೆಲ್ಲಾ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಂಬಂಧಪಟ್ಟ ಇಲಾಖೆಗೆ ದೊರೆಯುತ್ತದೆ.
೨. ವಿಟರನ್ನು ಆಯ್ಕೆ ಮಾಡಿಕೊಳ್ಳುವ, ರಜೆ ಹಾಕುವ, ಬೇಕಾದಷ್ಟು ವಿಶ್ರಾಂತಿ ತೆಗೆದುಕೊಳ್ಳುವ ಮತ್ತು ವಿಟರಿಂದ ಆಗುತ್ತಿರುವ ಹಿಂಸೆಯನ್ನು ಎದುರಿಸುವ ಅವಕಾಶ ದೊರೆಯುತ್ತದೆ.
೩. ಅವರ ಹಿನ್ನೆಲೆಯನ್ನು ಗಮನಿಸಿ ಈ ಕೆಲಸದಿಂದ ದೂರ ಮಾಡಿ ಬೇರೆ ಕೆಲಸ ಕೊಡಿಸುವ ಅಥವಾ ಬೇರೆ ಬಗೆಉ ಒಳ್ಳೆಯ ಬದುಕು ಕಟ್ಟಿಕೊಳ್ಳುವಂತೆ ಸಹಾಯ ಮಾಡಲು ಸಮಾಜಸೇವಾ ಸಂಸ್ಥೆಗಳಿಗೆ ದಾರಿ ಮುಕ್ತವಾಗುತ್ತದೆ.
೪. ಹಿಂದು ಮುಂದಿಲ್ಲದೇ ಬಂದು ಈ ಕೂಪಕ್ಕೆ ಬೀಳುವುದನ್ನು ತಪ್ಪಿಸಬಹುದು.
೫. ಕಾನೂನಿನ ಕಣ್ಣು ತಪ್ಪಿಸಿ ಯಾರಾದರೂ ಈ ದಂದೆ ನಡೆಸಲು ಹೊರಟರೆ ಪರವಾನಿಗಿ ಪಡೆದವರೇ ಸುಳುಹು ಕೊಡುತ್ತಾರೆ, ಮತ್ತು ಅಂತಹ ಕಡೆ ಹೋಗಲು ವಿಟರೂ ಹಿಂಜರಿಯುತ್ತಾರೆ.
೬. ಈ ಕೆಲಸದಲ್ಲಿ ತೊಡಗಿಸಿಕೊಂಡಿರುವವರ ಆರೋಗ್ಯವನ್ನು ಅಗಾಗ ತಪಾಸಣೆ ನಡೆಸುವ ವ್ಯವಸ್ಥೆ ಮಾಡಬಹುದು.
೭. ಎಲ್ಲಕ್ಕಿಂತ ಮಿಗಿಲಾಗಿ ಅಸಾಹಯಕತೆಯಿಂದ ಹಿಂಸೆಗೆ ಒಳಗಾಗುವುದನ್ನು ಮತ್ತು ಒಲ್ಲದ ಮನಸ್ಸಿನಿಂದ ಈ ಕೆಲಸಕ್ಕೆ ಇಳಿಯುವುದನ್ನು ತಪ್ಪಿಸಬಹುದು.

ಕೊನೆಯದಾಗಿ ಹೇಳುವುದೇನೆಂದರೆ ವೇಶ್ಯಾವಾಟಿಕೆಯನ್ನು ಸಂಪೂರ್ಣ ತೆಗೆದು ಹಾಕಲು ಇನ್ನು ಸಾವಿರ ವರ್ಷ ಹೋದರೂ ಸಾಧ್ಯವಿಲ್ಲ. ಒಂದು ವೇಳೆ ಹಾಗೆ ಮಾಡಿದರೂ ಅದರಿಂದ ಅತ್ಯಾಚಾರಗಳು ಅಧಿಕವಾಗುವ ಅಪಾಯ ಇದ್ದೇ ಇದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...