ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಫೆಬ್ರವರಿ, 2019 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಎಂ.ಹೆಚ್. 370 ನಿಗೂಢ ಕಣ್ಮರೆ!

ಮಾರ್ಚ್ 8, 2014 ರ ನಡುರಾತ್ರಿ ಹನ್ನೆರಡೂವರೆಗೆ ಸರಿಯಾಗಿ ಕೌಲಾಲಂಪುರ ದಿಂದ ಒಂದು ವಿಮಾನವು ಹೊರಡುತ್ತೆ. ಅದು ಮರುದಿನ ಬೆಳಗ್ಗೆ 6.30 ರ ಹೊತ್ತಿಗೆ ಚೀನಾದ ಬೀಜಿಂಗ್ ನ್ನು ಹೋಗಿ ಸೇರಬೇಕು. ಆದರೆ ಮರುದಿನ ಬೆಳಿಗ್ಗೆ ಅದು ಎಷ್ಟು ಹೊತ್ತು ಕಳೆದರೂ ಬೀಜಿಂಗ್ ಹೋಗಿ ಸೇರಲೇ ಇಲ್ಲ. ಅದಾಗಿ ಬರೋಬ್ಬರಿ ಐದು ವರ್ಷಗಳು ಕಳೆಯುತ್ತಾ ಬಂದರೂ ಇದುವರೆಗೂ ಕೂಡ ವಿಮಾನವು ಏನಾಯ್ತು, ಎಲ್ಲಿ ಹೋಯಿತು, ಈಗ ಎಲ್ಲಿದೆ, ಸಮುದ್ರಕ್ಕೆ ಬಿದ್ದು ಹೋಯಿತ, ಸಿಡಿದು ಹೋಯಿತಾ, ಸುಟ್ಟು ಬೂದಿ ಅಗೋಯ್ತಾ, ಅಥವಾ ಅನ್ಯಗ್ರಹ ವಾಸಿಗಳು ಏನಾದ್ರು ಅಪಹರಣ ಮಾಡ್ಕೊಂಡು ತಗೊಂಡೆ ಹೋಗ್ಬಿಟ್ರ ಏನಾಯ್ತು ಅನ್ನುವ ಸುಳಿವು ಸಿಕ್ಕಿಲ್ಲ. ಆ ವಿಮಾನದ ಹೆಸರು ಮಲೇಶಿಯನ್ 370. ಅದರಲ್ಲಿ ಇದ್ದಿದ್ದು 229 ಜನ ಪ್ರಯಾಣಿಕರು ಮತ್ತು 12 ಜನ ಸಿಬ್ಬಂದಿಗಳು. ಈ ವಿಮಾನದ ಕಣ್ಮರೆಯು ವಿಮಾನಗಳ ಇತಿಹಾಸದಲ್ಲೇ ಅತಿದೊಡ್ಡ ಒಗಟಾಗಿ ಉಳಿದಿದೆ. ಅತ್ಯಾಧುನಿಕ ತಂತ್ರಜ್ಞಾನದ ಈ ಕಾಲದಲ್ಲಿಯೂ ಈ ರೀತಿ ನೂರಾರು ಜನರು ತುಂಬಿರುವ ದೊಡ್ಡದೊಂದು ವಿಮಾನವು ಕಳೆದು ಹೋಗುವುದು ಅಂದರೆ ನಂಬಲು ಕಷ್ಟವಾದರೂ ನಂಬಲೇ ಬೇಕಾಗಿದೆ. ಎಂ.ಎಚ್. 370 ವಿಮಾನವು ಬೀಜಿಂಗ್ ಮತ್ತು ಕೌಲಾಲಂಪುರ್ ನಡುವೆ ಪ್ರತಿದಿನವೂ ಓಡಾಡುತ್ತಿರುತ್ತದೆ. ಕೌಲಾಲಂಪುರ್ ಇಂದ ಬೀಜಿಂಗ್ ಗೆ 5.30 ಘಂಟೆಗಳ ಪ್ರಯಾಣ. ಅಂದು ಆ ವಿಮಾನದಲ್ಲಿ 49000 ಕೆಜಿಯಷ್ಟು ಉರುವಲು ಇತ್ತು. ಇದು ಸುಮಾರು ಏಳು ಮುಕ್ಕಾಲು ಗಂಟೆಗಳಷ್ಟು ಹೊತ್ತು ಹಾರಾಡಲು ಸಾ