ವಿಷಯಕ್ಕೆ ಹೋಗಿ

ಹಿಂದಿಯೇತರರ ಮೇಲೆ ಇಂಡಿಯಾ ಹೂಡಿರುವ ಯುದ್ದ!

ಇಂಡಿಯಾ ಒಕ್ಕೂಟ 1947 ರಿಂದಲೂ ಒಂದು ಯುದ್ಧವನ್ನು ಮಾಡುತ್ತಾ ಬಂದಿದೆ! ಅದು ಪರೋಕ್ಷ ಯುದ್ದ. ಯಾರ ಮೇಲೆ ಅಂದರೆ 'ತನ್ನದೇ ಪ್ರಜೆಗಳು' ಅಂತ ನಂಬಿಸಲಾಗಿರುವ ಹಿಂದಿಯೇತರ ಜನರ ಮೇಲೆ! ಹಿಂದಿಯೇತರ ನುಡಿಗಳ ನಾಶ ಮತ್ತು ಆ ಜನರ ಸ್ವಾತಂತ್ರ್ಯ ಹರಣ ಈ ಯುದ್ಧದ ಉದ್ದೇಶ. ಇದು ಚೀನಾ ದೇಶವು ಮುಸ್ಲಿಮರ ಅಸ್ತಿತ್ವವನ್ನು ಹೊಸಕಿ ಹಾಕುತ್ತಿರುವಷ್ಟೇ ಕ್ರೌರ್ಯದ ಕೆಲಸ. 
ಇದನ್ನು ಯಾರು ಶುರು ಮಾಡಿದರು ಅಂತ ನೋಡಲು ಹೋದರೆ ಗಾಂಧಿ, ನೆಹರು, ಅಂಬೇಡ್ಕರ್ ಮುಂತಾದ ದೊಡ್ಡ ದೊಡ್ಡ ಹೆಸರುಗಳೇ ಮುಂದೆ ಬರುತ್ತವೆ. ಜಾತಿ ಸಮಾನತೆಗೆ ಅಷ್ಟು ಮಹತ್ವ ಕೊಟ್ಟ ಅದೇ ಅಂಬೇಡ್ಕರ್ ನುಡಿ ಸಮಾನತೆಯನ್ನು ಮಾತ್ರ ಕಡೆಗಣಿಸಿದ್ದು ಆಘಾತ ಉಂಟುಮಾಡುವ ವಿಷಯ. ಒಕ್ಕೂಟ ರಚನೆಯಾದ ಹೊಸದರಲ್ಲಿ 'ಒಂದಾಗುವಿಕೆ'ಗಾಗಿ ಹಾಗೆ ಮಾಡಲಾಯ್ತು ಅಂತ ತೇಪೆ ಹಾಕಬಹುದು ಅಷ್ಟೇ. ತಮಾಷೆ ಅಂದರೆ ಡಿಎಂಕೆ ಬಿಟ್ಟರೆ ಯಾವುದೇ ರಾಜ್ಯದ ಪ್ರಾದೇಶಿಕ ಪಕ್ಷಗಳುಇ ಇದರ ಬಗ್ಗೆ ದನಿ ಎತ್ತುತಿಲ್ಲ!
ಆದರೆ ಅಲ್ಲಿಂದ ಶುರುವಾದ ನಮ್ಮ ಸ್ವಾತಂತ್ರ್ಯ ಹರಣದ ಕೆಲಸ ಇಂದೂ ನಿಂತಿಲ್ಲ, ಬಿಜೆಪಿ ಆಡಳಿತದಲ್ಲಿ ಅದು ಇನ್ನಷ್ಟು ವೇಗವನ್ನು ಪಡೆದುಕೊಂಡಿದೆ. ಇದನ್ನು ತಡೆಯುವುದು ಹೇಗೆ? ನಮ್ಮ ನುಡಿಯ ಜೊತೆಗೆ ನಮ್ಮತನವನ್ನು ಉಳಿಸಿಕೊಳ್ಳುವುದು ಹೇಗೆ? 
ಮೊದಲಿಗೆ ಈ ಹಿಂದಿ ಒಕ್ಕೂಟದ ಹುನ್ನಾರವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ದೇಶ ಅನ್ನುವುದು ಒಂದು ಬೋಗಸ್ ಬಣ್ಣ, ಇದರ ಹಿಂದೆ ಇರುವುದು ಹಿಂದಿ ತೋಳ ಅಷ್ಟೇ. ಎಲ್ಲರೂ ಪ್ಲಾನ್ ಮಾಡಿ ನಮ್ಮನ್ನು ಒಂದು ಕೆಡ್ಡದೊಳಗೆ ಬೀಳಿಸಿಕೊಂಡಿದ್ದಾರೆ. ಇದರಿಂದ ಹೊರ ಬರುವ ದಾರಿಯನ್ನು ಹುಡುಕದೆ ಹೋದರೆ ನಾವು ಮತ್ತು ನಮ್ಮ ಮುಂದಿನ ಪೀಳಿಗೆ ಅಸ್ತಿತ್ವ ಕಳೆದುಕೊಂಡ ಜೀತದಾಳುಗಳಾಗಿ ಬದುಕಬೇಕಾಗುತ್ತೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ,

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು