ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು